ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜೀವ್‌ಗಾಂಧಿ ವಿವಿ ಸ್ಥಳಾಂತರ ಇಲ್ಲ: ಯಡಿಯೂರಪ್ಪ  Search similar articles
ರಾಮನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಬಗ್ಗೆ ಎದ್ದಿರುವ ವಿವಾದ ಈಗ ಸ್ವಲ್ಪ ಮಟ್ಟಿಗೆ ತಣ್ಣಗಾಗಿರುವ ಹಾಗೆ ಕಂಡು ಬಂದಿದೆ.

ರಾಜೀವ್‌ಗಾಂಧಿ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಬೇರೆಡೆಗೆ ಸ್ಥಳಾಂತರಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬಳ್ಳಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ.

ವಿಶ್ವವಿದ್ಯಾಲಯವನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಉದ್ದೇಶ ಸರಕಾರಕ್ಕೆ ಇಲ್ಲ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ವಿವಿಯನ್ನು ಸ್ಥಳಾಂತರಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜೆಡಿಎಸ್ ಹಿಂದಕ್ಕೆ ತೆಗೆದುಕೊಂಡಿದೆ. ಆದರೆ ಈ ಯೋಜನೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರಕಾರಕ್ಕೆ ಒತ್ತಡ ಹೇರಲಾಗುವುದು ಎಂದು ಜೆಡಿಎಸ್ ತಿಳಿಸಿದೆ.
ಮತ್ತಷ್ಟು
ಗೋಲಿಬಾರ್: ಗಾಯಗೊಂಡ ಪುಟ್ಟಪ್ಪ ಹೊನ್ನತ್ತಿ ನಿಧನ
ಗುರುವಾರ ಸಚಿವ ಸಂಪುಟ ವಿಸ್ತರಣೆ
ವಿವಿ ಸ್ಥಳಾಂತರ: ಸರಕಾರದ ವಿರುದ್ಧ ಆಕ್ರೋಶ
ಗಣಿಗಾರಿಕೆ ಶೀಘ್ರ ರಾಷ್ಟ್ರೀಕರಣಕ್ಕೆ ಸಿಎಂ ಒತ್ತಾಯ
ಪಕ್ಷಾಂತರಿಗಳನ್ನು ಸೋಲಿಸಲು ತೊಡೆತಟ್ಟಿದ ಗೌಡ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ