ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿನ ಪ್ರಮುಖ ಆರೋಪಿ ಅತುಲ್ ರಾವ್ ಅವರಿಗೆ ಸೂಕ್ತ ಚಿಕಿತ್ಸೆ ನೀಡದೆ ರಾಜಕೀಯ ನಡೆಸಲಾಗುತ್ತಿದೆ ಎಂದು ಅತುಲ್ ಪತ್ನಿ ಮೀರಾರಾವ್ ಆರೋಪಿಸಿದ್ದಾರೆ.
ಈ ಪ್ರಕರಣದ ಬಳಿಕ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಅತುಲ್ ರಾವ್ ಅವರನ್ನು ಬಲಿಪಶು ಮಾಡಲಾಗುತ್ತಿದೆ. ಜೈಲಿನಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಇದರಿಂದ ಆತಂಕ ಉಂಟಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಪತಿ ಅತುಲ್‌ಗೆ ಅಸ್ತಮಾ ಕಾಯಿಲೆ ಇದ್ದು, ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದ ಮೀರಾ, ಇದರ ಹಿಂದೆ ಉಡುಪಿ ಶಾಸಕ ರಘುಪತಿ ಭಟ್ ಅವರ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅತುಲ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಬಂಧಿಸಲಾಗಿರುವ ಬಗ್ಗೆ ವಿವರಣೆ ನೀಡಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ಈ ಮಧ್ಯೆ ಅತುಲ್ ರಾವ್ ನ್ಯಾಯಾಂಗ ಬಂಧನ ನಾಳೆಗೆ ಕೊನೆಗೊಳ್ಳಲಿದೆ. ಬುಧವಾರದಂದು ಅವರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬರಲಿದೆ.
|