ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಮಾಧ್ಯಮ: ಸು.ಕೋಗೆ ತೆರಳಲು ನಿರ್ಧಾರ  Search similar articles
ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲೇ ನೀಡಬೇಕೆಂಬ ವಾದವನ್ನು ಒಪ್ಪದ ರಾಜ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಮ್‌ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.

"ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ಸರಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತದೆ. ಭಾಷಾ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಅಗತ್ಯವಿಲ್ಲ ಎನ್ನುವ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡ ನಾಡಿನಲ್ಲಿರುವ ಎಲ್ಲರೂ ಕನ್ನಡಿಗರೊಂದಿಗೆ ಬೆರೆತು ಬಾಳುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಸಮರ್ಪಕ ವಾದ ಮಂಡಿಸಿ ಕನ್ನಡಪರ ತೀರ್ಪು ಪಡೆಯುತ್ತೇವೆ ಭರವಸೆ ತಮಗಿದೆ" ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಕನ್ನಡಪರ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.
ಮತ್ತಷ್ಟು
ಶಾಸಕರಿಗೆ ಬಿಜೆಪಿಯಿಂದ ಹಣದ ಆಮಿಷ: ರೇವಣ್ಣ
ಸಿದ್ದರಾಮಯ್ಯರಿಂದ ಹೊಸ ಪಕ್ಷ?
ಎಸ್ಪಿ ಬೆಂಬಲ ಅಧಿಕಾರಕ್ಕಾಗಿ: ಖರ್ಗೆ
ಆ.29ರಿಂದ ಅಕ್ಕ ವಿಶ್ವ ಕನ್ನಡ ಸಮ್ಮೇಳನ
ಅತುಲ್ ಬಂಧನದಲ್ಲಿ ರಾಜಕೀಯ ಕೈವಾಡ: ಮೀರಾರಾವ್
ರಾಜೀವ್‌ಗಾಂಧಿ ವಿವಿ ಸ್ಥಳಾಂತರ ಇಲ್ಲ: ಯಡಿಯೂರಪ್ಪ