ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಪಕ್ಷಾಂತರಗೊಂಡಿರುವುದರಿಂದ ಎರಡೂ ಪಕ್ಷಗಳ ನಾಯಕರು ಈಗ ಸಮಾನ ದುಃಖಿಗಳು. ಈ ಹಿನ್ನೆಲೆಯಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ನಿರ್ಧರಿಸಿದೆ. ಕಾಂಗ್ರೆಸ್ ಯಾವೆಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆಯೋ ಆ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ನಡೆಸಲು ಕಾಂಗ್ರೆಸ್ ಸಿದ್ದವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕ್ಷೇತ್ರಗಳ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಸೇರಿದ್ದೇವೆ ಎಂದು ಶಾಸಕರು ತಿಳಿಸಿದ್ದಾರೆ. ಆದರೆ ಶಾಸನ ಸಭೆಯ ಅರ್ಧದಷ್ಟು ಪ್ರತಿಪಕ್ಷ ಶಾಸಕರೇ ಗೆದ್ದು ಬಂದಿರುವಾಗ ಆ ಭಾಗದ ಅಭಿವೃದ್ದಿಯನ್ನು ಸರಕಾರ ಕಡೆಗೆಣಿಸಲಿದೆಯೇ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಇನ್ಯಾರೂ ಪಕ್ಷ ಬಿಟ್ಟು ತೆರಳಲ್ಲ. ಇನ್ನು ಮುಂದೆ ಬಿಜೆಪಿ ಪ್ರಯತ್ನಗಳೆಲ್ಲಾ ವಿಫಲವಾಗುತ್ತದೆ ಎಂದು ತಿಳಿಸಿದ ಅವರು, ಇದೇ ತಿಂಗಳ 15ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದ್ದು, ಮುಖಂಡರೊಂದಿಗೆ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
|