ಕಾಂಗ್ರೆಸ್ ಶಾಸಕರು ಪಕ್ಷಾಂತರಗೊಂಡಿರುವ ಬಗ್ಗೆ ಆತಂಕಗೊಂಡಿರುವ ಕಾಂಗ್ರೆಸ್ ನಾಯಕರು ಗುರುವಾರ ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಲು ಗುರುವಾರ ಬೆಳಿಗ್ಗೆ 11 ಗಂಟೆಗೆ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದ್ದು, ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಮುಖಂಡರು, ಶಾಸಕರು, ಜಿಲ್ಲಾ ಅಧ್ಯಕ್ಷರುಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮುಂದೆ ನಡೆಯಲಿರುವ ಉಪಚುನಾವಣೆಯ ಕುರಿತು ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಮೊದಲು ಶಾಸಕಾಂಗ ಸಭೆಯನ್ನು ಈ ತಿಂಗಳ 15ರಂದು ನಿಗದಿಪಡಿಸಲಾಗಿತ್ತು. ಆದರೆ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ಕಂಗೆಟ್ಟಿದೆ. ಇದರಿಂದ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಬಹುದೆಂಬ ಭೀತಿ ಅವರನ್ನು ಕಾಡುತ್ತಿದೆ. ಅಲ್ಲದೆ, ಈಗಾಗಲೇ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಕೈ ಜೋಡಿಸುವ ಬಗ್ಗೆಯೂ ಮಾತುಕತೆ ಪ್ರಗತಿಯಲ್ಲಿದೆ.
|