ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ತಮ್ಮ ಪುತ್ರ ಜೆ.ನರಸಿಂಹಸ್ವಾಮಿ ಬಯಸಿರುವುದು ಅವರ ವೈಯಕ್ತಿಕ ನಿರ್ಧಾರ ಎಂದು ಚಿಕ್ಕಬಳ್ಳಾಪುರ ಸಂಸದ ಆರ್.ಎಲ್. ಜಾಲಪ್ಪ ಹೇಳಿದ್ದಾರೆ.
ಇದರ ಜೊತೆಗೆ ಇತ್ತೀಚೆಗೆ ನಡೆದ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಿದ್ದರ ವಿರುದ್ಧ ಕೆಂಡಾಮಂಡಲವಾಗಿರುವ ಜಾಲಪ್ಪ, ಮೈತ್ರಿ ಮುಂದುವರಿಕೆ ಮಹಾಪರಾಧ ಎಂದು ಗುಡುಗಿದ್ದಾರೆ.
ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ. ಕಾಂಗ್ರೆಸ್ ಆಂತರಿಕ ತಾಕಲಾಟಗಳಿಂದ ನರಳುತ್ತಿದೆ ಎಂದಿರುವ ಅವರು, ಆಗಸ್ಟ್ 1ರಂದು ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
|