ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಸ್ನೋಟಿಕರ್, ಜಾರಕಿಹೊಳಿ, ನಾಯಕ್‌ರಿಗೆ ಸಚಿವ ಸ್ಥಾನ  Search similar articles
ರಾಜ್ಯ ಸಚಿವ ಸಂಪುಟ ವಿಸ್ತರಣೆ ಗುರುವಾರ ನಡೆಯಲಿದ್ದು, ಸಂಜೆ 4.30ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಮೂವರು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂದು ಸಚಿವ ಸಂಪುಟ ವಿಸ್ತರಣೆಗೊಳ್ಳಲಿದ್ದು, ಬಿಜೆಪಿಗೆ ಸೇರ್ಪಡೆಗೊಂಡಿರುವ ಆನಂದ್ ಅಸ್ನೋಟಿಕರ್, ಬಾಲಚಂದ್ರ ಜಾರಕಿಹೊಳಿ ಹಾಗೂ ಶಿವನಗೌಡ ನಾಯಕ್ ಅವರುಗಳು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಈ ಬೆಳವಣಿಗೆಯಿಂದ ಪಕ್ಷೇತರ ಶಾಸಕರಿಗೆ ಯಾವುದೇ ಅಪಾಯವಿಲ್ಲ. ಪಕ್ಷೇತರರು ಮುಂದಿನ ಐದು ವರ್ಷಗಳವರೆಗೂ ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಜಗ್ಗೇಶ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಮಧ್ಯೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿ ಬಂದಿತ್ತಾದರೂ, ಕೊನೆಯ ಕ್ಷಣದಲ್ಲಿ ಕೈಬಿಟ್ಟಿದ್ದಾರೆ.

ಉಮೇಶ್ ಕತ್ತಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಂತ್ರಿಗಿರಿ ನೀಡುವ ಕುರಿತು ಮುಖ್ಯಮಂತ್ರಿ ಒಲವು ತೋರಿದ್ದರು. ಆದರೆ ಸಚಿವ ಸಂಪುಟದ ಕೊನೆಯ ಮೂರು ಸ್ಥಾನಗಳನ್ನು ಆನಂದ್ ಅಸ್ನೋಟಿಕರ್, ಬಾಲಚಂದ್ರ ಜಾರಕಿಹೊಳಿ ಹಾಗೂ ಶಿವನಗೌಡ ನಾಯಕ್ ಅವರುಗಳಿಗೆ ನೀಡಬೇಕೆಂದು ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದರು ಎನ್ನಲಾಗಿದೆ.
ಮತ್ತಷ್ಟು
ಸು.ಕೋ ತೀರ್ಪು: ಖೇಣಿ ಹಾದಿ 'ನೈಸ್'
ಜೆಡಿಎಸ್ ಮೈತ್ರಿ: ಜಾಲಪ್ಪ ಅಸಮಾಧಾನ
ಹೋಟೆಲ್ ಸಂಘದಿಂದ ಸಿಎಂಗೆ ಪತ್ರ
ಕಾಂಗ್ರೆಸ್ ತುರ್ತು ಶಾಸಕಾಂಗ ಸಭೆ
ಅತುಲ್ ನ್ಯಾಯಾಂಗ ಬಂಧನ ವಿಸ್ತರಣೆ
ಲೋಕಸಭಾ ಚುನಾವಣಾ ಕಣದಿಂದ ಅಂಬರೀಷ್ ಹಿಂದಕ್ಕೆ