ಕೇಂದ್ರ ಸರಕಾರದಲ್ಲಿ ಹಾಗೂ ರಾಜ್ಯ ರಾಜಕೀಯದಲ್ಲಿ ಆಗಿರುವ ದಿಡೀರ್ ಬದಲಾವಣೆಗಳ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದಿರುವ ಶಾಸಕರ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಹಾಗಾದಲ್ಲಿ ಮಾತ್ರ ಕಾಂಗ್ರೆಸ್ ನೇತ್ರತ್ವದ ಯುಪಿಎ ಸರಕಾರಕ್ಕೆ ಬೆಂಬಲ ನೀಡಲು ಸಾಧ್ಯವಾಗುವುದು ಎಂಬುದು ದೇವೇಗೌಡರ ಸ್ಪಷ್ಟ ಅಭಿಪ್ರಾಯ.
ಕೇಂದ್ರದಲ್ಲಿ ಕಾಂಗ್ರೆಸ್ ಶೀಘ್ರವೇ ವಿಶ್ವಾಸಮತ ಯಾಚನೆ ಮಾಡಬೇಕಿರುವುದರಿಂದ ಸರಕಾರ ಉಳಿಸಿಕೊಳ್ಳಲು ಜೆಡಿಎಸ್ ಸೇರಿದಂತೆ ಇತರ ಸಣ್ಣ ಪುಟ್ಟ ಪಕ್ಷಗಳ ನೆರವು ಅತ್ಯಗತ್ಯ. ಕೇಂದ್ರಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ದೇವೇಗೌಡರನ್ನು ಕಾಂಗ್ರೆಸ್ ನಾಯಕರು ಮಾತುಕತೆಗೆ ಆಹ್ವಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ದೇವೇಗೌಡರು ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವಿವರಗಳು ತಿಳಿದು ಬಂದಿಲ್ಲವಾದರೂ, ಸಕರಾತ್ಮಕ ಬೆಳವಣಿಗೆ ಕಂಡು ಬಂದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|