ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಿಕೂನ್‌ಗುನ್ಯಾ ಪೀಡಿತರಿಗೆ ಸೂಕ್ತ ನೆರವು:ಸದಾನಂದಗೌಡ  Search similar articles
ಚಿಕೂನ್‌ಗುನ್ಯಾದಿಂದ ಬಾಧಿತರಾಗಿರುವ ಸಣ್ಣ ರೈತರು, ಕೂಲಿಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶೇಷವಾಗಿ ಪುತ್ತೂರು ಹಾಗೂ ಸುಳ್ಯ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಚಿಕೂನ್‌ಗುನ್ಯಾ ರೋಗಕ್ಕೆ ತುತ್ತಾಗಿದ್ದಾರೆ. ಇದರಿಂದ ಸಮರ್ಥವಾಗಿ ದುಡಿಯಲು ಆಗದೆ, ಕೃಷಿ ಕೆಲಸ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ ಎಂದು ವಿವರಿಸಿದರು.

ಈ ನಿಟ್ಟಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ರೈತರು ಹಾಗೂ ಕೂಲಿಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕಾಗಿರುವುದು ಸರಕಾರದ ಕರ್ತವ್ಯ. ಆದ್ದರಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ರೈತರ ಅಭಿವೃದ್ದಿಯೇ ಸರ್ಕಾರದ ಮುಖ್ಯ ಗುರಿಯಾಗಿದೆ. ಸರಕಾರಕ್ಕೆ ಸೂಕ್ತ ಸಹಕಾರ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ಕೂಡ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಪೂರಕವಾಗಿ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು.
ಮತ್ತಷ್ಟು
ದೆಹಲಿಗೆ ಗೌಡರ ರಾಜಕೀಯ ಯಾತ್ರೆ
ಇಂದು ಸಂಜೆ ಯಡಿಯೂರಪ್ಪ ಸಂಪುಟ ವಿಸ್ತರಣೆ
ಅಸ್ನೋಟಿಕರ್, ಜಾರಕಿಹೊಳಿ, ನಾಯಕ್‌ರಿಗೆ ಸಚಿವ ಸ್ಥಾನ
ಸು.ಕೋ ತೀರ್ಪು: ಖೇಣಿ ಹಾದಿ 'ನೈಸ್'
ಜೆಡಿಎಸ್ ಮೈತ್ರಿ: ಜಾಲಪ್ಪ ಅಸಮಾಧಾನ
ಹೋಟೆಲ್ ಸಂಘದಿಂದ ಸಿಎಂಗೆ ಪತ್ರ