'ಜೆಸಿನಗರ ಗಲಭೆಗೆ ಸರಕಾರವೇ ಹೊಣೆ'
|
|
|
|
|
ಬೆಂಗಳೂರು, ಶನಿವಾರ, 12 ಜುಲೈ 2008( 15:34 IST )
|
|
|
|
|
|
|
|
ಜೆಸಿ ನಗರದಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರಕಾರವೇ ನೇರ ಹೊಣೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ಆರೋಪಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆಯಲ್ಲಿ ಅನೇಕ ಅಮಾಯಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬಿಜೆಪಿ ಸರಕಾರ ಆಡಳಿತದಲ್ಲಿರುವ ವೇಳೆ ಇಂತಹ ಘಟನೆ ನಡೆದಿರುವುದು ಸರಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ. ಅಮಾಯಕರ ಮೇಲೆ ಹಲ್ಲೆ ನಡೆಸಿರುವ ಪೊಲೀಸರ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ಸಹಜಸ್ಥಿತಿಯತ್ತ ನಗರ ಜೆಸಿ ನಗರದಲ್ಲಿನ ಪ್ರಾರ್ಥನ ಮಂದಿರ ಅಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಗಲಭೆ ಈಗ ಸಹಜಸ್ಥಿತಿಯತ್ತ ಮರಳುತ್ತಿದೆ. ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವಹಿವಾಟು ಪ್ರಾರಂಭಗೊಂಡಿದೆ.
ಪರಿಸ್ಥಿತಿ ಮತ್ತೆ ವಿಕೋಪಕ್ಕೆ ತಿರುಗಬಹುದೆಂಬ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿಬಂದೋ ಬಸ್ತ್ ಏರ್ಪಡಿಸಲಾಗಿದೆ.
|
|
|
|