ರೈತರಿಗೆ ಉಚಿತ ವಿದ್ಯುತ್
|
|
|
|
|
ಬೆಂಗಳೂರು, ಶನಿವಾರ, 12 ಜುಲೈ 2008( 20:35 IST )
|
|
|
|
|
|
|
|
ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಸರಕಾರ ಚಿಂತನೆ ನಡೆಸುತ್ತಿದ್ದು, ಬಜೆಟ್‌ನಲ್ಲಿ ಘೋಷಣೆ ಮಾಡಲು ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ತಿಳಿಸಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸರಕಾರ ಬದ್ಧವಾಗಿದ್ದು, ಬಜೆಟ್‌ನಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ, ರೈತರ ಪಂಪ್ಸೆಟ್‌ಗಳಿಗೆ ಮೀಟರ್ ಅಳವಡಿಸುವ ಕುರಿತು ಸರಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ವಿದ್ಯುತ್ ಕಳ್ಳತನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪತ್ತೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿನ ವಿದ್ಯುತ್ ಅಭಾವಕ್ಕೆ ಕೇಂದ್ರ ಸರಕಾರಕ್ಕೆ ನಿಯೋಗ ಕಳುಹಿಸಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕಾರಣ ಮಾಡಿದರೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
|
|
|
|