ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಚಿತ ವಿದ್ಯುತ್: 17ರ ತನಕ ಕಾದು ನೋಡಿ  Search similar articles
PTI
ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಸರಕಾರದ ನಿರ್ಧಾರವನ್ನು ಈ ತಿಂಗಳ 17ರಂದು ನಡೆಯಲಿರುವ ಮುಂಗಡಪತ್ರದಲ್ಲಿ ಸ್ಪಷ್ಟ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸಾಂಸ್ಕೃತಿಕ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮಳೆ ಹಾಗೂ ವಿದ್ಯುತ್ ಅಭಾವ ರಾಜ್ಯದಲ್ಲಿ ಹೆಚ್ಚಾಗಿ ಕಂಡಿದೆ. ಕಳೆದ ಒಂದು ತಿಂಗಳಿನಿಂದ ಮಳೆ ಬಂದಿಲ್ಲ. ಇದರಿಂದ ರೈತರಿಗೆ ಅಘಾತವಾಗಿದೆ. ಈ ನಿಟ್ಟನಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು, ಗೋ ಆಧಾರಿತ, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಿದ್ದು, ಮೈಸೂರಿನಲ್ಲಿಯೇ ಇದಕ್ಕೆ ಚಾಲನೆ ನೀಡಲಾಗುವುದು. ಅಲ್ಲದೆ, ಗುಡಿಕೈಗಾರಿಕೆಗೆ ಹೆಚ್ಚಿನ ಪ್ರೇರಣೆ ನೀಡಲಾಗುವುದು ಎಂದು ತಿಳಿಸಿದರು.

ಈ ಬಾರಿ ಕೃಷಿಗೆ ಪೂರಕವಾದ ಅಂಶಗಳನ್ನು ಬಜೆಟ್‌ನಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ ಅವರು, ಹಂತ ಹಂತವಾಗಿ ಪ್ರಣಾಳಿಕೆ ಅಂಶಗಳನ್ನು ಜಾರಿಗೊಳಿಸಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ಮತ್ತಷ್ಟು
ಗಣಿಧಣಿಗಳ ಕಡಿವಾಣಕ್ಕೆ ರಾಷ್ಟ್ರೀಕರಣ ಮದ್ದು: ಗೌಡ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ: ಸಿಎಂ
ರೈತರಿಗೆ ಉಚಿತ ವಿದ್ಯುತ್
ಸಿದ್ಧರಾಮಯ್ಯರಿಗೆ ಬಿಜೆಪಿ ಗಾಳ
'ಜೆಸಿನಗರ ಗಲಭೆಗೆ ಸರಕಾರವೇ ಹೊಣೆ'
ಗೌಡರ ಬ್ಲಾಕ್‌ಮೇಲ್ ತಂತ್ರ?