ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ಸಂಸದ ಜಾಲಪ್ಪ ಪಕ್ಷಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ.
ಕಾಂಗ್ರೆಸ್‌ನಲ್ಲಿ ತನ್ನನ್ನು ಕಡೆಗೆಣಿಸಲಾಗುತ್ತಿದೆ ಎಂದು ಆರೋಪಿಸಿ ಸಂಸದ ಜಾಲಪ್ಪ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲು ಹಿಂದೇಟು ಹಾಕಿರುವ ಜಾಲಪ್ಪ, ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಅಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ತಿಂಗಳ 22ರಂದು ನಡೆಯಲಿರುವ ಯುಪಿಎ ಸರಕಾರದ ವಿಶ್ವಾಸಮತಯಾಚನೆಯ ದಿನದಂದು ಗೈರು ಹಾಜರಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೆ ಜಾಲಪ್ಪ ಪುತ್ರ ಶಾಸಕ ನರಸಿಂಹಸ್ವಾಮಿ ಬಿಜೆಪಿ ಸೇರಿದ್ದಾರೆ.
|