ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯೂ ಸಜ್ಜು
|
|
|
|
|
ಭಾನುವಾರ, 13 ಜುಲೈ 2008( 17:39 IST )
|
|
|
|
|
|
|
|
ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಐವರು ಶಾಕಸರನ್ನು ಸೇರಿಸಿಕೊಳ್ಳುವುದರೊಂದಿಗೆ ರಾಜ್ಯ ಸರಕಾರದ ಸ್ಥಿರತೆ ಬಗ್ಗೆ ಇದ್ದ ಆತಂಕವನ್ನು ದೂರಪಡಿಸಿಕೊಂಡಿರುವ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಎರಡನೇ ವಾರದಲ್ಲಿ ಸುಮಾರು 20 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಉದ್ದೇಶಿಸಿದ್ದು, ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲು ಪಕ್ಷ ನಿರ್ಧರಿಸಿದೆ.
ಎಲ್.ಕೆ. ಅಡ್ವಾಣಿ, ಶಾನವಾಜ್ ಹುಸೇನ್ ಮತ್ತಿತರನ್ನು ಮುಂದಿನ ಲೋಕಸಭಾ ಚುನಾವಣಾ ಅಭ್ಯರ್ಥಿಗಳೆಂದು ಈಗಾಗಲೇ ಘೋಷಣೆ ಮಾಡಿರುವ ಬಿಜೆಪಿ, ಅದೇ ರೀತಿಯಲ್ಲಿ ಮುಂದಿನ ತಿಂಗಳ ಎರಡನೇ ವಾರದಲ್ಲಿ ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಘೋಷಣೆ ಮಾಡಲಿದೆ.
ಅಲ್ಲದೆ, ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಂಡಳಿ ಮಟ್ಟದ ಸಮಿತಿಗಳನ್ನು ಶೀಘ್ರದಲ್ಲಿ ರಚಿಸಲು ತೀರ್ಮಾನಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಮಧ್ಯೆ, ಪರಮಾಣು ಒಪ್ಪಂದದಿಂದಾಗಿ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಇದೇ 22ರಂದು ಬಹುಮತ ಸಾಬೀತು ಪಡಿಸಬೇಕಿದೆ. ಆದರೆ ಪಕ್ಷಗಳ ಬಲಾಬಲದಲ್ಲಿ ಯುಪಿಎಗೆ ತೊಡಕು ಕಂಡುಬಂದಿದೆ. ಈ ಎಲ್ಲಾ ಬೆಳವಣಿಗೆಯಿಂದಾಗಿ ಚುರುಕುಗೊಂಡಿರುವ ರಾಜ್ಯ ಬಿಜೆಪಿ ಲೋಕಸಭಾ ಚುನಾವಣಾ ತಯಾರಿಯಲ್ಲಿದೆ.
|
|
|
|