ಹಣ ಹಾಗೂ ಅಧಿಕಾರದಿಂದ ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಕಾಂಗ್ರೆಸ್ ತೊರೆದಿರುವ ಶಾಸಕರು ಹೇಡಿಗಳು ಎಂದು ಟೀಕಿಸಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಅತ್ತು ಕರೆದು ಕಾಂಗ್ರೆಸ್‌ನಿಂದ ಟಿಕೇಟ್ ಪಡೆದು ಗೆದ್ದ ಬಳಿಕ ಹಣದ ಆಮಿಷಕ್ಕೆ ಬಲಿಯಾಗಿ ಬಿಜೆಪಿ ಹಿಂದೆ ಓಡಿಹೋಗಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಯಾರೋ ಒಬ್ಬರಿಂದ ಉಳಿಯಲು ಅಥವಾ ಅಳಿಯಲು ಸಾಧ್ಯವಿಲ್ಲ. ಹಾಗೆಂದುಕೊಂಡರೆ ಭಾವಿಸಿದರೆ ಅದು ಕೇವಲ ಭ್ರಮೆ ಮಾತ್ರ. ಇದೇ ಬರುವ 21ರಂದು ಯುಪಿಎ ಸರಕಾರ ವಿಶ್ವಾಸಮತದಲ್ಲಿ ಜಯಗಳಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಸಗೊಬ್ಬರಕ್ಕಾಗಿ ಹಾವೇರಿಯಲ್ಲಿ ನಡೆದ ಲಾಠಿ ಚಾರ್ಜ್ ಸೇರಿದಂತೆ ಇದುವರೆಗೆ ಐದು ಕಡೆಗಳಲ್ಲಿ ಲಾಠಿ ಚಾರ್ಜ್ ನಡೆದಿದೆ. ಇದು ಬಿಜೆಪಿ ಸಾಧನೆಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.
|