ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವಲ್ಲಿ ಇನ್ನು ಒಂದು ವಾರ ವಿಳಂಬವಾಗುವ ಸಾಧ್ಯತೆಗಳಿವೆ.
ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಮಾಣೀಕೃತದ ಪ್ರತಿ ಇನ್ನೂ ಸರಕಾರಕ್ಕೆ ತಲುಪಿಲ್ಲ. ಅಲ್ಲದೆ, ಈ ತೀರ್ಪಿಗೆ ಸಂಬಂಧಿಸಿದಂತೆ ಸಮಗ್ರ ದಾಖಲೆಗಳ ಕ್ರೋಡೀಕರಣ ಇನ್ನು ಕೂಡ ಪ್ರಗತಿಯಲ್ಲಿದೆ. ಈ ನಿಟ್ಟಿನಲ್ಲಿ ಸುಪ್ರಿಂಕೋರ್ಟ್‌ಗೆ ಸಲ್ಲಿಸಬೇಕಾಗಿರುವ ಮನವಿಯಲ್ಲಿ ವಿಳಂಬವಾಗಲಿದೆ ಎಂದು ಸರಕಾರ ತಿಳಿಸಿದೆ.
ಭಾಷಾ ಕಲಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ 14 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಇದೇ ತಿಂಗಳ ಎರಡರಂದು ತೀರ್ಪು ನೀಡಿದ್ದು, ಪ್ರಾಥಮಿಕ ಶಿಕ್ಷಣಗಳಲ್ಲಿ ಕನ್ನಡ ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿತ್ತು. ಇದರಿಂದ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಅಲ್ಲಲ್ಲಿ ಪ್ರತಿಭಟನೆ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಸಾಹಿತಿಗಳು, ತಜ್ಞರು ಸೇರಿದಂತೆ ವಿವಿಧ ಮುಖಂಡರ ಜೊತೆ ಮಾತುಕತೆ ನಡೆಸಿದ ಸರಕಾರ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿತ್ತು.
|