ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ನೀಡುವ ನಿಟ್ಟಿನಲ್ಲಿ ರೈತರೊಂದಿಗೆ ಸಂವಾದ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿಗೆ ಬೆಂಬಲ ಬೆಲೆ ನೀಡುವುದು ಕಾರ್ಖಾನೆ ಮಾಲೀಕರ ಕರ್ತವ್ಯ. ಈ ಕುರಿತು ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ರೈತಪರವಾಗಿರುವ ಬಿಜೆಪಿ ಸರಕಾರ ರೈತರ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು. ಅಂತೆಯೇ, ಈ ಸಮಸ್ಯೆಯನ್ನು ಸರಕಾರ ಶೀಘ್ರವೇ ಬಗೆಹರಿಸುವುದು ಎಂದು ಅವರು ತಿಳಿಸಿದರು.
ಕಬ್ಬಿಗೆ 160ರೂ. ಬೆಂಬಲ ಬೆಲೆ ನೀಡಬೇಕೆಂದು ರೈತರು ಕಳೆದ ಕೆಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಾ ಬಂದಿದ್ದರು. ರಾಷ್ಟ್ರಪತಿ ಆಡಳಿತ ಸಂದರ್ಭದಲ್ಲಿ ರಾಜ್ಯಪಾಲರು ಈ ಬಗ್ಗೆ ಭರವಸೆ ನೀಡಿದ್ದರೂ, ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗಿರಲಿಲ್ಲ.
|