ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಅಗತ್ಯ ಪ್ರಮಾಣದ ಕಲ್ಲಿದ್ದಲನ್ನು ಪೂರೈಸುವಂತೆ ಆಗ್ರಹಿಸಿ ಕೇಂದ್ರ ಕಲ್ಲಿದ್ದಲು ಖಾತೆ ಸಚಿವರನ್ನು ಭೇಟಿ ಮಾಡಲು ನಿಯೋಗವೊಂದು ಶೀಘ್ರವೇ ತೆರಳಲಿದೆ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಇದೇ ತಿಂಗಳ 21ರಂದು ದೆಹಲಿಗೆ ನಿಯೋಗವೊಂದು ತೆರಳಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ಈಗಿರುವ ಉತ್ಪಾದನಾ ವ್ಯವಸ್ಥೆಯ ಬಗ್ಗೆ ಇದೇ 17ರಂದು ಪರಾಮರ್ಶೆ ನಡೆಸಲಾಗುವುದು ಎಂದು ತಿಳಿಸಿದರು.
ಅಲ್ಲದೆ, ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹೀಗೆ ಮುಂದುವರಿದರೆ ಲೋಡ್ ಶೆಡ್ಡಿಂಗ್ ಜಾರಿಗೆ ತರುವುದು ಅನಿವಾರ್ಯ ಎಂದು ಅವರು ಸ್ಪಷ್ಟ ಪಡಿಸಿದರು. ಜಲ ವಿದ್ಯುತ್ ಕೇಂದ್ರಗಳಲ್ಲಿ ಉಂಟಾಗಿರುವ ನೀರಿನ ಕೊರತೆಯನ್ನು ನೀಗಿಸಲು ಮೋಡ ಬಿತ್ತನೆ ಕಾರ್ಯಕ್ಕೂ ಶೀಘ್ರ ಚಾಲನೆ ನೀಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|