ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉತ್ತರ ಕರ್ನಾಟಕದ ಋಣ ತೀರಿಸಿ: ಕುಮಾರಸ್ವಾಮಿ  Search similar articles
ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಘೋಷಿಸಿ, ಬಿಜೆಪಿಗೆ ಮತ ನೀಡಿರುವ ಉತ್ತರ ಕರ್ನಾಟಕದ ಋಣ ತೀರಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲು ಉದ್ದೇಶಿಸಿ ಶಂಕುಸ್ಥಾಪನೆಯೂ ಆಗಿರುವಾಗ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಥಳ ಬದಲಾಯಿಸುವ ಪ್ರಸ್ತಾಪ ಮಾಡಿರುವುದು ತೀವ್ರ ವಿಷಾದನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿಯಾಗಬೇಕೆಂಬುದು ತಮ್ಮ ನಿಲುವಾಗಿತ್ತು. ಈ ನಿಟ್ಟಿನಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆಗ ಉಪಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಇಂದು ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಘೋಷಣೆ ಮಾಡಲು ಹಿಂದೇಟು ಹಾಕುತ್ತಿರುವುದು ಒಳ್ಳೆಯದಲ್ಲ ಎಂದಿದ್ದಾರೆ.

ಸಂವಿಧಾನ ತೊಡಕಿಲ್ಲ

ಎರಡನೇ ರಾಜಧಾನಿಯಾಗಿ ಘೋಷಿಸಲು ಯಾವುದೇ ಸಂವಿಧಾನ ತೊಡಕು ಇಲ್ಲ. ತಾವು ಮುಖ್ಯಮಂತ್ರಿಯಾಗಿದ್ದಾಗ ಈ ಬಗ್ಗೆ ತಜ್ಞರ ಜತೆ ಚರ್ಚಿಸಿರುವುದಾಗಿ ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮತ್ತಷ್ಟು
ರಾಯಚೂರಿನಲ್ಲಿ ರಾಜ್ಯ ಒಲಿಂಪಿಕ್
ಕಬ್ಬು ಬೆಳೆಗೆ ಪ್ರೋತ್ಸಾಹ ಧನ : ಮಾತುಕತೆ ವಿಫಲ
ಕಲ್ಲಿದ್ದಲು ಕೊರತೆ: ಕೇಂದ್ರಕ್ಕೆ ರಾಜ್ಯ ನಿಯೋಗ
17ರಂದು ಚೊಚ್ಚಲ ಬಜೆಟ್ ಮಂಡನೆ
ಬಿಜಾಪುರ: ನಾಲ್ವರ ಬರ್ಬರ ಹತ್ಯೆ
ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಇತ್ಯರ್ಥ: ಸಿಎಂ