ಮೈಸೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ ಉಪನ್ಯಾಸಕರ ಜಟಾಪಟಿ ತಾರಕಕ್ಕೇರಿದೆ.
ವಾಣಿಜ್ಯ ಉಪನ್ಯಾಸಕರು ಅರ್ಥಶಾಸ್ತ್ರ ಬೋಧಿಸುತ್ತಿದ್ದು, ಇದು ಅವೈಜ್ಞಾನಿಕವಾಗಿದೆ. ಸೂಕ್ಷ್ಮ ವ್ಯತ್ಯಾಸಗಳಿರುವ ಹೊಸ ಕೋರ್ಸ್‌ಗಳನ್ನು ಪರಿಚಯಿಸುವಾಗ ವಿಭಾಗವಾರು ಬೋಧನೆ ಮತ್ತು ಪರೀಕ್ಷಾ ಜವಾಬ್ದಾರಿಯನ್ನು ವಹಿಸಿ ಕೊಡಬೇಕೆಂದು ಅರ್ಥಶಾಸ್ತ್ರ ಉಪನ್ಯಾಸಕರು ಉಪಕುಲಪತಿಗಳನ್ನು ಒತ್ತಾಯಿಸಿದ್ದಾರೆ.
ಇದೇ ವೇಳೆ ವಾಣಿಜ್ಯ ವಿಭಾಗದವರೂ ಕೂಡ ತಮ್ಮ ಪ್ರತಿಭಟನೆ ದಾಖಲಿಸಿದ್ದು ಯಾವುದೇ ನಿರ್ಧಾರಕ್ಕೆ ಬರುವಲ್ಲಿ ಉಪಕುಲಪತಿಗಳು ವಿಫಲರಾಗಿದ್ದಾರೆನ್ನಲಾಗಿದೆ. ಉನ್ನತ ಶಿಕ್ಷಣ ಸಚಿವರು ಮಧ್ಯಸ್ಥಿಕೆ ವಹಿಸಬೇಕೆಂದು ಕೆಲವರು ಒತ್ತಾಯಿಸುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮಸ್ಯೆ ಬಗೆಹರಿಸಲು ಸರಕಾರ ಮಧ್ಯಪ್ರವೇಶ ಅನಿವಾರ್ಯ ಎಂಬುದಾಗಿ ಜನರಾಡಿಕೊಳ್ಳುತ್ತಿದ್ದಾರೆ.
|