ಮಾಜಿ ಸಚಿವ ರೋಷನ್ ಬೇಗ್ ಈಗ ವಿವಾದದಲ್ಲಿ ಸಿಲುಕಿದ್ದಾರೆ.
ಈ ಹಿಂದೆ ಅವರು ಜಯಮಹಲ್ ಶಾಸಕರಾಗಿದ್ದಾಗ ಕ್ಷೇತ್ರ ಅಭಿವೃದ್ಧಿ ನಿಧಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಅಂಶವನ್ನು ಬಿಬಿಎಂಪಿ ದಾಖಲೆಗಳು ವ್ಯಕ್ತಪಡಿಸಿವೆ. ಆದರೆ, ಇದರಲ್ಲಿ ತನ್ನ ಪಾತ್ರವೇನಿಲ್ಲ ಎಲ್ಲವೂ ಅಧಿಕಾರಿಗಳ ತಪ್ಪು ಇರಬಹದುದು ಎಂದು ರೋಷನ್ ಬೇಗ್ ಹೇಳಿದ್ದಾರೆ.
ತಮ್ಮ ಅಧಿಕಾರವಧಿಯಲ್ಲಿ ಅತಿಹೆಚ್ಚು ಹಣ ಬಿಡುಗಡೆ ಮಾಡಿಸಿಕೊಂಡಿರುವ ಶಾಸಕರು ಎಂಬ ಖ್ಯಾತಿಯನ್ನು ರೋಷನ್ ಬೇಗ್ ಹೊಂದಿದ್ದರು.
ಆದರೆ, ಈ ಅವ್ಯವಹಾರ ಕುರಿತು ಬಿಬಿಎಂಪಿ ಅಧಿಕಾರಿಗಳು ಏಕೆ ಕ್ರಮ ಕೈಗೊಂಡಿಲ್ಲ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಈ ಬಗ್ಗೆ ಲೋಕಾಯುಕ್ತಕ್ಕೆ ಸಾರ್ವಜನಿಕರು ಅರ್ಜಿಯನ್ನೂ ಸಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ದೃಷ್ಟಿಯಿಂದ ಅವ್ಯವಹಾರಗಳನ್ನು ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
|