ಬೆಂಗಳೂರು: ಸಂತೆಮರಹಳ್ಳಿಯ ಮಾಜಿ ಶಾಸಕ ಜೆಡಿಎಸ್‌ನ ಕೃಷ್ಣಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ರಾಜ್ಯಾಧ್ಯಕ್ಷ ಸದಾನಂದಗೌಡರು ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಬಿಜೆಪಿಗೆ ಹಳೇ ಮೈಸೂರು ಭಾಗದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿಸಿದರು.
ಕೃಷ್ಣಮೂರ್ತಿ ಅವರು ಚಾಮರಾಜನಗರದ ದಲಿತ ಮುಖಂಡರಾಗಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದಲ್ಲಿ ಬಿಜೆಪಿಗ ಬಲ ಬಂದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದರೊಂದಿಗೆ ಅನ್ಯ ಪಕ್ಷಗಳ ಸದಸ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಆಪರೇಷನ್ ಕಮಲ ಮುಂದುವರಿದಿದೆ.
|