ರಸಗೊಬ್ಬರ ಕೊರತೆ ಮತ್ತು ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರದಂದು ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಯಡಿಯೂರಪ್ಪ, ಇದಕ್ಕೆ ಪೂರ್ವಭಾವಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯನ್ನು ತುಂಬಿಕೊಡುವಲ್ಲಿ ಕೇಂದ್ರ ಸರಕಾರ ಆಸಕ್ತಿ ವಹಿಸಬೇಕು, ರಾಜ್ಯದ ವಿದ್ಯುತ್ ಕೊರತೆಗೆ ಕೂಡಲೇ ಸ್ಪಂದಿಸಬೇಕೆಂದು ಭೇಟಿಯ ಸಂದರ್ಭದಲ್ಲಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಡೆದ ರಾಜಕೀಯ ವಿದ್ಯಮಾನಗಳ ಕುರಿತೂ ರಾಜ್ಯಪಾಲರಿಗೆ ವಿವರಣೆ ನೀಡಿರುವುದಾಗಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
|