ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಪಸಭಾಧ್ಯಕ್ಷ ಚುನಾವಣೆ: ಬೋಪಯ್ಯ ಅವಿರೋಧ ಆಯ್ಕೆ Search similar articles
ಮಂಗಳವಾರ ನಡೆಯಲಿರುವ ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರ ಚುನಾವಣೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಬೋಪಯ್ಯ ಅವರನ್ನು ಹೊರತುಪಡಿಸಿದರೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರ ಆಯ್ಕೆ ಅವಿರೋಧವಾಗಲಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಬೋಪಯ್ಯ ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪಕ್ಷದ ನಿಲುವಿನಂತೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ಇದು ತಮಗೆ ಸಂತಸ ತಂದಿದೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಖಚಿತವಾಗಿತ್ತು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸ್ಪರ್ಧೆಗಿಳಿಯುವ ಸಾಹಸ ಮಾಡಿರಲಿಲ್ಲ. ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಚಿವರುಗಳಾದ ಆರ್. ಅಶೋಕ್, ಕಟ್ಟಾ ಸುಬ್ರಮಣ್ಯ ನಾಯ್ಡು, ಗೋವಿಂದ ಕಾರಜೋಳ, ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಮತ್ತಷ್ಟು
ಬಾಂಬ್ ಅಲ್ಲ, ಅದು ಕಳವಾಗಿದ್ದ 'ಸೂಟ್‌‌ಕೇಸ್' !
ಭಯೋತ್ಪಾದಕ ನಿಗ್ರಹಕ್ಕೆ ಕಠಿಣ ಕ್ರಮ: ಸಿಎಂ
ಮಂಗಳೂರಿನಲ್ಲೂ ಬಾಂಬ್ ಪತ್ತೆ ?
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ
ಧಾರಾಕಾರ ಮಳೆ: ಲೋಡ್ ಶೆಡ್ಡಿಂಗ್ ಹಿಂತೆಗೆತಕ್ಕೆ ಚಿಂತನೆ
ಸ್ಫೋಟ - ಚನ್ನಪಟ್ಟಣದಲ್ಲಿ ತಾಲೀಮು