ಸಮಾಜ ಘಾತುಕ ಶಕ್ತಿಗಳ ಚಟುವಟಿಕೆಗಳ ನಿಯಂತ್ರಣಕ್ಕೆ ಗುಪ್ತಚರ ಇಲಾಖೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸರಣಿ ಬಾಂಬ್ ಸ್ಫೋಟದ ಕುರಿತು ನಿಯಮ 69ರಡಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂತಹ ಸಮಸ್ಯೆ ಮರುಕಳಿಸದಂತೆ ಗುಪ್ತಚರ ಇಲಾಖೆಯನ್ನು ಸದೃಢಗೊಳಿಸಬೇಕೆಂದು ತಿಳಿಸಿದರು.
ಯಾವುದೇ ಕಾಯ್ದೆಗಳಿಂದ ಇಂತಹ ದುಷ್ಕ್ರತ್ಯಗಳನ್ನು ಅಳಿಸಿಹಾಕಲು ಸಾಧ್ಯವಿಲ್ಲ. ಮೊದಲು ನಮ್ಮಲ್ಲಿರುವ ಹುಳುಕನ್ನು ಸರಿಪಡಿಸಿಕೊಳ್ಳಬೇಕು. ಏಕೆಂದರೆ ಫೋಟಾ ಕಾಯ್ದೆ ಜಾರಿಯಲ್ಲಿದ್ದಾಗಲೂ ಸಂಸತ್ತಿನ ಮೇಲೆ ದಾಳಿ ನಡೆದಿತ್ತು ಎಂದು ವಿವರಣೆ ನೀಡಿದರು.
ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್, ಬಾಂಬ್ ಸ್ಫೋಟದ ಮುನ್ಸೂಚನೆ ಇದ್ದರೂ ಪೊಲೀಸ್ ಇಲಾಖೆ ವಿಫಲವಾಗಿದೆ. ಈಗಾಲಾದರೂ ಎಚ್ಚೆತ್ತುಕೊಂಡು ಪೊಲೀಸ್ ಇಲಾಖೆಗೆ ಮತ್ತಷ್ಟು ಶಕ್ತಿ ತುಂಬುವ ಅಗತ್ಯವಿದೆ ಎಂದು ತಿಳಿಸಿದರು.
|