ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸ್ಫೋಟದ ಹಿಂದೆ ಬಿಜೆಪಿ ಕೈವಾಡ: ರೇವಣ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸ್ಫೋಟದ ಹಿಂದೆ ಬಿಜೆಪಿ ಕೈವಾಡ: ರೇವಣ್ಣ Search similar articles
NRB
ಕಳೆದ 48 ದಿನಗಳ ಸರ್ಕಾರದ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಗರದಲ್ಲಿ ಸರಣಿ ಬಾಂಬ್ ಸ್ಫೋಟದ ಪಿತೂರಿ ನಡೆಸಿರುವ ಬಗ್ಗೆ ಅನುಮಾನಗಳಿವೆ ಎಂದು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಆರೋಪ ಮಾಡಿದ್ದಾರೆ.

ಸದನದಲ್ಲಿ ಸರಣಿ ಬಾಂಬ್ ಸ್ಫೋಟದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ಸರ್ಕಾರ ನಡೆಸುತ್ತೇವೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಗುಜರಾತ್‌‌ನಲ್ಲಿ ಗಲಾಟೆ ನಡೆದ ರೀತಿಯಲ್ಲಿಯೇ ರಾಜ್ಯದಲ್ಲೂ ಸ್ಫೋಟಕ್ಕೆ ಹುನ್ನಾರ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಆದರೆ ಮುಖ್ಯಮಂತ್ರಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಪಿತೂರಿ ನಡೆಸುತ್ತಿದ್ದಾರೆಂದು ಆರೋಪಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

ಉತ್ತಮ ಹುದ್ದೆಗಳಿಗೆ ಪ್ರಾಮಾಣಿಕ ಅಧಿಕಾರಿಗಳನ್ನು ಸರ್ಕಾರ ನೇಮಕ ಮಾಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಇದರಿಂದಾಗಿಯೇ ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದರು.
ಮತ್ತಷ್ಟು
ಮೈಸೂರು ಪಾಲಿಕೆಯ 10 ಮಂದಿ ಬಿಜೆಪಿಗೆ
ಮಂತ್ರಿ ಮಂಡಲ ಪುನರಾಚನೆಗೆ ಬಿಜೆಪಿ ಬದ್ಧ: ಡಿವಿಎಸ್
ರಸಗೊಬ್ಬರ: ಮುಂದುವರಿದ ಪ್ರತಿಭಟನೆ
ಸ್ಫೋಟ: ಮಹತ್ವದ ಸುಳಿವು ಪತ್ತೆಗೆ ಇಲಾಖೆ ವಿಫಲ
ಗುಪ್ತಚರ ಇಲಾಖೆ ಬಲವರ್ಧನೆಗೆ ಕುಮಾರಸ್ವಾಮಿ ಆಗ್ರಹ
ಉಪಸಭಾಧ್ಯಕ್ಷ ಚುನಾವಣೆ: ಬೋಪಯ್ಯ ಅವಿರೋಧ ಆಯ್ಕೆ