ಚಿಕ್ಕಮಗಳೂರು ಮತ್ತು ಹುಬ್ಬಳ್ಳಿಗಳಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 45ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಚಿಕ್ಕಮಗಳೂರಿನ ಅಂಬಾಳಿ ಬಳಿ ಬೆಳಿಗಿನ ಜಾವ ಕೆಎಸ್ಆರ್ಟಿಸಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದು, ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಅಪಘಾತ:
ನಗರದ ವರೂರು ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಖಾಸಗಿ ವಾಹನವೊಂದು ಪಲ್ಟಿ ಹೊಡೆದು ಉರುಳಿ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಸಾವನ್ನ ಪ್ಪಿದ್ದಾರೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ತೀವ್ರವಾಗಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನ ಕವಾಗಿದೆ. ಸಣ್ಣಪುಟ್ಟ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಂಪೆನಿಗೆ ಕೆಲಸಗಾರರನ್ನು ಒಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದಲೇ ಈ ಅನಾಹುತ ನಡೆದಿದೆ ಎಂದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ.
|