ಸದನದಲ್ಲಿ ಕಳೆದ ಎರಡು ದಿನಗಳಿಂದ ಬಿಸಿಬಿಸಿ ಚರ್ಚೆಗೆ ಗ್ರಾಸವಾದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣವನ್ನು ಕೊನೆಗೂ ಸಿಓಡಿಗೆ ಒಪ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬುಧವಾರ ವಿಧಾನಪರಿಷತ್‌ನಲ್ಲಿ ಪದ್ಮಪ್ರಿಯಾ ಸಾವಿನ ಪ್ರಕರಣದ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಸಚಿವ ವಿ.ಎಸ್. ಆಚಾರ್ಯ, ಪದ್ಮಪ್ರಿಯಾ ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸಲು ಸರ್ಕಾರದ ಯಾವುದೇ ತಕರಾರಿಲ್ಲ ಎಂದು ತಿಳಿಸಿದರು.
ಸದನ ಆರಂಭಗೊಂಡ ದಿನದಿಂದ ಪದ್ಮಪ್ರಿಯಾ ಸಾವಿನ ಕುರಿತು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಪ್ರಕರಣದ ಹಿಂದೆ ಅನೇಕ ಅನುಮಾನಗಳು ಕಂಡು ಬಂದಿರುವುದರಿಂದ ಸಿಬಿಐಗೆ ವಹಿಸಬೇಕೆಂದು ಪ್ರತಿಪಕ್ಷದ ನಾಯಕರು ಆಗ್ರಹಿಸಿದ್ದರು. ಆದರೆ ಸಿಬಿಐಗೆ ವಹಿಸಲು ಒಪ್ಪದ ಗೃಹ ಸಚಿವರು ಸಿಓಡಿಗೆ ವಹಿಸಲು ತೀರ್ಮಾನಿಸಿದ್ದಾರೆ.
|