ಮಂಗಳೂರಿನಿಂದ ಹಾಸನಕ್ಕೆ ಹೊರಟಿದ್ದ ಗೂಡ್ಸ್ ರೈಲು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರಿಂದ ಮಂಗಳೂರು-ಬೆಂಗಳೂರು ನಡುವೆ ಒಂದು ವಾರಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ 5.45ರ ಸಮಯದಲ್ಲಿ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ರೈಲು ಹಳಿತಪ್ಪಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ ರೈಲ್ವೇಹಳಿಗೆ ಹಾನಿಯಾಗಿದ್ದು ಮತ್ತೆ ರೈಲು ಸಂಚಾರ ಆರಂಭಕ್ಕೆ ಒಂದು ವಾರ ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾರ್ವಜನಿಕರ ಆಕ್ರೋಶ:
ಜಲ್ಲಿಕಲ್ಲು ತುಂಬಿಕೊಂಡು ಹೊರಟಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಬೀಳುತ್ತಿದ್ದಂತೆ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದಿರು ಸಾಗಟ ಮತ್ತು ಗಣಿಕಾರಿಕೆಯಿಂದಾಗಿ ರಸ್ತೆಗಳು ತೀವ್ರ ಹಾಳಾಗಿದ್ದು, ರೈಲು ಸಂಚಾರವೂ ಸ್ಥಗಿತಗೊಂಡಿರುವುದು ಜನರ ಆಕ್ರೋಶಕ್ಕೆ ಕಾರಣ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿದ್ದು ತೆರವು ಕಾರ್ಯ ಆರಂಭವಾಗಿದೆ.
|