ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ವಿವಾದಿತ ಹೊಗೇನಕಲ್ ಯೋಜನೆ ಸ್ಥಗಿತಕ್ಕೆ ಆದೇಶಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಅಧಿವೇಶನ ಮುಗಿದ ಬಳಿಕ ದೆಹಲಿಗೆ ಸರ್ವಪಕ್ಷಗಳ ನಿಯೋಗ ತೆರಳಲಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಗಡಿ ವಿಷಯವೇ ಇತ್ಯರ್ಥವಾಗಿಲ್ಲ. ಹೀಗಾಗಿ ಯೋಜನೆ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿದೆ.
ವಿಧಾನಸಭಾ ಅಧಿವೇಶನದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ಅಧಿಕಾರಿಗಳ ನಿಯೋಗವನ್ನು ಹೊಗೇನಕಲ್ ವಿವಾದಿತ ಸ್ಥಳಕ್ಕೆ ಕಳುಹಿಸಿ ವರದಿ ಪಡೆಯಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರು ಶಿಲಾನ್ಯಾಸ ಮಾಡಿದ ನಂತರ ಕಾಮಗಾರಿ ಪ್ರಾರಂಭಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವಿಷಯದಲ್ಲಿ ಕೇಂದ್ರದ ಮಧ್ಯಸ್ಥಿಕೆಗೆ ಸರ್ವ ಪಕ್ಷ ನಿಯೋಗ ದೆಹಲಿಗೆ ತೆರಳಿ ಒತ್ತಡ ಹೇರಲಾಗುವುದು. ಇದಕ್ಕೂ ಮೊದಲು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು.
|