ವಿಧಾನಪರಿಷತ್‌ನ ಸಭಾಪತಿ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲುವ ನಿಟ್ಟಿನಲ್ಲಿ ಶುಕ್ರವಾರ ಜೆಡಿಎಸ್ ನಾಯಕರ ಜೊತೆ ಕಾಂಗ್ರೆಸ್ ಮಾತುಕತೆ ನಡೆಸಿದೆ.
ಈ ಸಂಬಂಧ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಜೆಡಿಎಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ. ಹಂಗಾಮಿ ಸಭಾಪತಿ ಎನ್. ತಿಪ್ಪಣ್ಣ ಅವರನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ಒತ್ತಡ ಹೇರುತ್ತಿದ್ದರೂ, ಆ ಬಗ್ಗೆ ಗಮನ ನೀಡಿದ ಜೆಡಿಎಸ್ ಈ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ನಿರ್ಧರಿಸಿದೆ.
ಕಾಂಗ್ರೆಸ್‌ನಲ್ಲಿ ಕೆ.ಸಿ. ಕೊಂಡಯ್ಯ, ವಿ.ಎಸ್. ಉಗ್ರಪ್ಪ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರ ಹೆಸರು ಸಭಾಪತಿ ಸ್ಥಾನಕ್ಕೆ ಕೇಳಿ ಬರುತ್ತಿದ್ದರೂ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.
ಈ ಹಿನ್ನೆಲೆಯಲ್ಲಿ ಕೆ.ಸಿ. ಕೊಂಡಯ್ಯ ಹೆಸರು ಅಂತಿಮಗೊಳ್ಳುವ ಸಂಭವ ನಿಚ್ಚಳವಾಗಿದೆ. ಇವರ ಆಯ್ಕೆಗೆ ಸಹಕರಿಸುವ ಕುರಿತಂತೆ ಜೆಡಿಎಸ್ ಜೊತೆ ಮಾತುಕತೆ ನಡೆಸಲು ಶುಕ್ರವಾರ ಅಥವಾ ಶನಿವಾರ ನಗರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆಹೊತ್ತಿರುವ ಪೃಥ್ವಿರಾಜ್ ಚೌಹಾಣ್ ಆಗಮಿಸುವ ನಿರೀಕ್ಷೆ ಇದೆ.
|