ತೈಲ ಉತ್ಪನ್ನಗಳ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನೂತನ ಹವಾನಿಯಂತ್ರಿತ ಐರಾವತ ಬಸ್‌ಗಳಿಗೆ ಹಸಿರು ನಿಶಾನೆ ನೀಡಿ ಅವರು ಮಾತನಾಡುತ್ತಿದ್ದರು.
ಡೀಸೆಲ್ ದರ ಏರಿಕೆಯಿಂದಾಗಿ ವಾರ್ಷಿಕ 150 ಕೋಟಿ ರೂಪಾಯಿ ಆರ್ಥಿಕ ಹೊರೆಯಾಗುತ್ತಿದ್ದು, ಬಸ್‌ಗಳ ನೌಕರರ ವೇತನ ಏರಿಕೆ ಕೂಡ ಬಾಕಿ ಇದೆ. ಈ ಎಲ್ಲಾ ವಿಚಾರಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಬೆಲೆ ಏರಿಕೆ ಬಗ್ಗೆ ಅಂತಿಮ ತೀರ್ಮಾನ ಮಾಡುವುದಾಗಿ ತಿಳಿಸಿದರು.
ಬಜೆಟ್‌ನಲ್ಲಿ ರಸ್ತೆ ಸಾರಿಗೆ ಸಂಸ್ಥೆಗೆ 408 ಕೋಟಿ ರೂಪಾಯಿ ನೆರವನ್ನು ಒದಗಿಸಲಾಗಿದ್ದು, ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು.
|