ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಹಿಂದೆ ಸಿಮಿ ಸಂಘಟನೆಯ ಕೈವಾಡವಿರುವುದು ಸ್ಪಷ್ಟವಾಗುತ್ತಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ನಗರ ಮತ್ತು ಚನ್ನಪಟ್ಟಣದಲ್ಲಿ ದೊರೆತಿರುವ ಸ್ಫೋಟಕಗಳ ಹಿಂದೆ ಸಿಮಿ ಕೈವಾಡವ ಅಂಶ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಮತ್ತ ಚನ್ನಪಟ್ಟಣದಲ್ಲಿ ದೊರೆತಿರುವ ಬಾಂಬ್ಗಳು ಒಂದೇ ಸಾಮ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಗಳೂರು ನಗರ ಹಾಗೂ ಸಿಸಿಬಿಯ ಸುಮಾರು 8 ವಿಶೇಷ ತಂಡಗಳು ರಾಜ್ಯದ ವಿವಿಧೆಡೆ ಸಂಚರಿಸಿದ್ದು, ಆರೋಪಿಗಳನ್ನು ಬಂಧಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ರಾಜಧಾನಿ ಬೆಂಗಳೂರು ಮತ್ತು ಇತರ ಕಡೆಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
|