ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶನಿವಾರ ದೆಹಲಿಗೆ ದೌಡಾಯಿಸಿದ್ದಾರೆ.
ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರವೇ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದರು.
ಆ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ವರಿಷ್ಠರ ಪಡಸಾಲೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತುಹಲಕ್ಕೆ ಎಡೆಮಾಡಿಕೊಟ್ಟಿದೆ.
ರಾಜ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷಗಾದಿಗೆ ಈ ಹಿಂದೆಯೇ ಬಹಳಷ್ಟು 'ಲಾಭಿ'ನಡೆದಿತ್ತು, ಅಲ್ಲದೇ ಖರ್ಗೆ ವಿರುದ್ಧವು ಹೈಕಮಾಂಡ್‌ಗೆ ದೂರುಗಳು ಹೋಗಿದ್ದವು.
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಹಿನ್ನೆಲೆಯಲ್ಲಿ ಡಿಕೆಶಿ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲು ತೆರಳಿರುವುದಾಗಿ ಕಾಂಗ್ರೆಸ್‌ನ ಕೆಲವು ಮೂಲಗಳು ತಿಳಿಸಿವೆ.
|