ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರತಿ ಜಿಲ್ಲೆಗೂ ವಿಮಾನಯಾನ ಸೌಲಭ್ಯ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರತಿ ಜಿಲ್ಲೆಗೂ ವಿಮಾನಯಾನ ಸೌಲಭ್ಯ: ಸಿಎಂ Search similar articles
ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಮಾನಯಾನ ಸೌಲಭ್ಯ ಕಲ್ಪಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ 150 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಶನಿವಾರ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಗೂ ವಾಯುಯಾನ ಸಂಪರ್ಕ ನೀಡುವುದು ಸರ್ಕಾರದ ಪ್ರಮುಖ ಗುರಿ.

ಈ ನಿಟ್ಟಿನಲ್ಲಿ ಈಗಾಗಲೇ 12 ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಮತ್ತು 10 ಜಿಲ್ಲೆಗಳಲ್ಲಿ ವಿಮಾನ ಇಳಿದಾಣ ಹಾಗೂ ವಿವಿಧ ಕಡೆಗಳಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ಕೊರತೆ ನೀಗಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದ ಅವರು, ಮಳೆಯ ಕೊರತೆಯಿಂದ ಬರ ಎದುರಾದರೆ ಅಂತಹ ಪ್ರದೇಶಗಳಲ್ಲಿ ಪರಿಸ್ಥಿತಿ ಕೈ ಮೀರುವ ಮೊದಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಉದ್ಯೋಗ ಖಾತರಿ ಯೋಜನೆಯಡಿ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ದೊರಕಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಉದ್ಯಾನನಗರಿಗೆ ಬಿಸಿ ಮುಟ್ಟಿಸಿದ 'ಗ್ರಹಣ'
ಕೆಪಿಸಿಸಿ ಅಧ್ಯಕ್ಷಗಾದಿ: ದೆಹಲಿಯಲ್ಲಿ ಡಿಕೆಶಿ
ಕ್ಷಮೆ ಕೇಳಿಲ್ಲ: ಮತ್ತೆ 'ಕುಚೇಲನ್' ವಿವಾದ
ಗ್ರಹಣಕ್ಕೆ 'ಬುದ್ದಿಜೀವಿ'ಗಳ ಸವಾಲ್
ಬಸ್ ಪ್ರಯಾಣ ದರ ಮತ್ತೆ ತುಟ್ಟಿ ?
ಸ್ಫೋಟದ ಹಿಂದೆ ಸಿಮಿ ನೆರಳು: ತನಿಖೆ ತೀವ್ರ