ಬೆಳಗಾವಿ ಪೊಲೀಸರು ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಶಂಕಿತ ಉಗ್ರನೊರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿಯಾಗಿರುವ ಶಂಕಿತ ಉಗ್ರನನ್ನು ತನ್ವಿರ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಖುಸ್ರಾನಗರದ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 3 ಸಿಡಿ, ಪಾಸ್ಫೋರ್ಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈತನ ಬಂಧನದಿಂದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಅನೇಕದ ಮಹತ್ವದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈತನಿಗೆ ಭಯೋತ್ಪಾದಕರ ಜೊತೆ ನಂಟಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಬಾಂಬ್ ಸ್ಫೋಟ ಪ್ರಕರಣದ ಕುರಿತಾಗಿಯೂ ಪ್ರಶ್ನಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
|