ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಭಾಪತಿ ಚುನಾವಣೆಗಾಗಿ ಮಾತ್ರ ಮೈತ್ರಿ: ಜೆಡಿಎಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಭಾಪತಿ ಚುನಾವಣೆಗಾಗಿ ಮಾತ್ರ ಮೈತ್ರಿ: ಜೆಡಿಎಸ್ Search similar articles
ವಿಧಾನಪರಿಷತ್‌‌ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದೊಂದಿಗೆ ಮಾಡಿಕೊಂಡಿರುವ ಮೈತ್ರಿ ಸಭಾಪತಿ ಚುನಾವಣೆಗೆ ಮಾತ್ರವೇ ಸೀಮಿತ. ಮುಂದೆ ಕಾಂಗ್ರೆಸ್ ಪಕ್ಷ ಕೈಗೊಳ್ಳುವ ನಿರ್ಧಾರದ ಆಧಾರದ ಮೇಲೆ ಮೈತ್ರಿ ಅವಲಂಭಿತವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸಭಾಪತಿ ಸ್ಥಾನವನ್ನು ಬಿಟ್ಟುಕೊಡುವ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಚೌವ್ಹಾಣ್ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಈ ವಿಷಯವನ್ನು ಅವರು ತಿಳಿಸಿದರು.

ಕಾಂಗ್ರೆಸ್‌‌ನೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆಯಂತೆ ಆ ಪಕ್ಷಕ್ಕೆ ಸಭಾಪತಿ ಸ್ಥಾನವನ್ನು ಬಿಟ್ಟುಕೊಡಲಾಗಿದೆ. ಹಾಗೆಯೇ ಉಪಸಭಾಪತಿ ಸ್ಥಾನವನ್ನು ಜೆಡಿಎಸ್‌‌ಗೆ ಬಿಟ್ಟುಕೊಡಲಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬಿಜೆಪಿ ಮೇಲೆ ಹರಿಹಾಯ್ದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ನಾಯಕರು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಸೆಳೆಯುವ ತಂತ್ರ ನಡೆಸುತ್ತಿದೆ. ಈ ಬಗ್ಗೆ ನಡೆದಿರುವ ಎಲ್ಲಾ ಬೆಳವಣಿಗೆಯನ್ನು ಶೀಘ್ರವೇ ಬಹಿರಂಗ ಪಡಿಸುತ್ತೇನೆ ಎಂದು ಅವರು ತಿಳಿಸಿದರು.
ಮತ್ತಷ್ಟು
ವಿಧಾನಪರಿಷತ್ ಚುನಾವಣೆಗೆ ಅಖಾಡ ಸಜ್ಜು
ಬೀದರ್: ಮಳೆಗೆ ಮನೆ ಕುಸಿದು 3 ಬಲಿ
ಮಂಗಳೂರು: ಲಾಠಿ ಪ್ರಹಾರಕ್ಕೆ ಸಿಪಿಎಂ ಖಂಡನೆ
ಬಿಜೆಪಿ ಸಂಸದ ಡಿ.ಸಿ.ಶ್ರೀಕಂಠಪ್ಪ ನಿಧನ
ಮಂಗಳೂರು: ಮೇಯರ್ ವಿರುದ್ಧ ಗಲಾಟೆ-ಲಾಠಿ ಚಾರ್ಜ್
ವಿಧಾನಸೌಧಕ್ಕೆ ಮುತ್ತಿಗೆ: ರೈತ ಸಂಘ ಎಚ್ಚರಿಕೆ