ಒಂದು ಮಹತ್ವದ ಬೆಳವಣಿಗೆಯಲ್ಲಿ ಶಾಸಕ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು. ಈಗ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷಗಾದಿ ಮೇಲೆ ದೃಷ್ಟಿ ನೆಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ ಬಳಿಕದ ವಿದ್ಯಮಾನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ವತಃ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಒಕ್ಕಲಿಗರ ಪ್ರಭಾವಿ ಮುಖಂಡರೆನಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಿ ಪಕ್ಷವನ್ನು ಮುನ್ನಡೆಸುವ ಕುರಿತು ಕಾಂಗ್ರೆಸ್ ನಿರ್ಧರಿಸಿದೆ. ಈ ನಡುವೆ ಈ ಬೆಳವಣಿಗೆಯಿಂದ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸ್ಥಿತಿಗೆ ತೊಡಕಾಗಬಹುದೆಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಈ ಕುರಿತಾದ ಅಂತಿಮ ನಿರ್ಧಾರ ಇನ್ನೆರಡು ದಿನಗಳಲ್ಲಿ ಹೊರಬರುವ ನಿರೀಕ್ಷೆ ಇದೆ.
|