ರಾಜಧಾನಿಯಲ್ಲಿ ಇತ್ತೀಚೆಗೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟವನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಚನ್ನಪಟ್ಟಣ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಮೂಲಕ ಕೆಲವು ದಿನಗಳ ಕಾಲ ರಾಜಧಾನಿಯ ಜನರು ಆತಂಕದಿಂದ ದಿನದೂಡುವಂತಾಗಿತ್ತು. ಸ್ಫೋಟದ ಬಳಿಕ ಘಟನೆಗೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸುವ ಮುನ್ನವೇ, ಉಗ್ರರು ಚನ್ನಪಟ್ಟದಲ್ಲಿ ಸ್ಫೋಟ ತಾಲೀಮು ನಡೆಸಿದ್ದರು ಎಂಬ ಆಘಾತಕಾರಿ ಅಂಶ ಬಯಲಿಗೆ ಬಂದಿತ್ತು.
ಇದೀಗ ಸರಣಿ ಬಾಂಬ್ ಸ್ಫೋಟವನ್ನು ಖಂಡಿಸಿ ವಿವಿಧ ಸಂಘಟನೆಗಳು ಚನ್ನಪಟ್ಟಣ ಬಂದ್‌ಗೆ ಮಂಗಳವಾರ ಕರೆ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದು. ಸಾರಿಗೆ ವ್ಯವಸ್ಥೆ ವಿರಳವಾಗಿದ್ದರಿಂದ ಜನ ಸಾಮಾನ್ಯರು ಪರದಾಡುವಂತಾಯಿತು.
|