ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಅನುದಾನ ಬಿಡುಗಡೆಯಲ್ಲಿ ಸರ್ಕಾರ ಪಕ್ಷಪಾತ ಧೋರಣೆ ತಾಳಿರುವುದಾಗಿ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿರುವ ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಅನುದಾನ ನಿಗದಿ ಹಾಗೂ ಅಭಿವೃದ್ದಿ ಕಾರ್ಯಗಳ ಮಂಜೂರಾತಿಯಲ್ಲಿ ನಿರ್ಲಕ್ಷಿಸಲಾಗಿದೆ ಎಂದು ದೂರಿದರು.
ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿಕೊಂಡು ಬಂದಿದ್ದರೂ, ಜೆಡಿಎಸ್ ಶಾಸಕರಿರುವ ತಾಲೂಕುಗಳಿಗೆ ಅನುದಾನ ಮಾತ್ರ ಪ್ರಕಟಿಸುತ್ತಿಲ್ಲ ಎಂದು ಟೀಕಿಸಿದರು.
ಅಲ್ಲದೆ, ಅಣೆಕಟ್ಟೆಗಳಿಂದ ಬೆಳೆಗೆ ನೀರು ಹರಿಸುವುದರಲ್ಲಿಯೂ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಬಿಜೆಪಿಯವರ ಪಕ್ಷ ಪಾತದ ವಿರುದ್ಧ ಸೂಕ್ತ ಸಂದರ್ಭದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
|