ಕಾರಿನಲ್ಲಿ ಹಣ ಕೊಂಡೊಯ್ಯುತ್ತಿದ್ದವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ 36 ಲಕ್ಷ ರೂ. ಹಾಡಹಗಲೇ ದೋಚಿಕೊಂಡು ಹೋಗಿರುವ ಘಟನೆ ಮಂಗಳವಾರ ನಗರದ ಕೂಡ್ಲು ಗೇಟ್ ಬಳಿ ನಡೆದಿದೆ.
ಮಂಗಳವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ನಗರದ ಕೂಡ್ಲು ಗೇಟ್ ಬಳಿ ಈ ಘಟನೆ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ನೌಕರರನ್ನು ನಗರದ ಸೈಂಟ್ಸ್ ಜಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೋಕುಲ್‌ದಾಸ್ ಗಾರ್ಮೆಂಟ್ಸ್ ಕಂಪೆನಿಯ ಮೂರು ಮಂದಿ ನೌಕರರು, ಹಣ ಪಡೆದುಕೊಂಡು ಕಾರಿನಲ್ಲಿ ತೆರಳುತ್ತಿದ್ದಾಗ, ಬೈಕ್‌ನಲ್ಲಿ ಬಂದ ನಾಲ್ವರು ಕಾರನ್ನು ಅಡ್ಡಗಟ್ಟಿ ನೌಕರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
|