ರಾಜ್ಯದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಹಾಗೂ ನಕ್ಸಲ್ ನಿಗ್ರಹಕ್ಕೆ ಹೆಚ್ಚಿ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಹಾಗೂ ನಕ್ಸಲ್ ನಿಗ್ರಹಕ್ಕೆ ಪೊಲೀಸ್ ಇಲಾಖೆಯನ್ನು ಬಲವರ್ಧನೆಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದ ಅವರು, ಪ್ರತಿ ತಿಂಗಳು ಮೂರು ಜಿಲ್ಲೆಗಳ ಅಭಿವೃದ್ದಿ ಪರಿಶೀಲನೆ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ವಿದ್ಯುತ್ ಸ್ಥಾವರ:
ಇದಕ್ಕೂ ಮೊದಲು ಮಾತನಾಡಿದ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ, ಬಳ್ಳಾರಿಯಲ್ಲಿ ಇನ್ನೊಂದು ಶಾಖೋತ್ಪನ್ನ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಈ ಸಂಬಂಧ ನೆರವು ಕೋರುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
|