ಚಿಕ್ಕಮಗಳೂರು: ಕೇಂದ್ರದಲ್ಲಿ ಕಾಂಗ್ರೆಸ್‌ಗೆ ವಿರುದ್ಧವಾಗಿ ನಡೆದುಕೊಂಡ ಜೆಡಿಎಸ್ ರಾಜ್ಯದಲ್ಲಿ ಅದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಸಮಯ ಸಾಧಕ ಪಕ್ಷ ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ವಿಶ್ವಾಸಮತಯಾಚನೆ ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡದೆ ಕಾಂಗ್ರೆಸ್ ವಿರೋಧಿ ಎಂದು ಗುರುತಿಸಿಕೊಂಡಿತ್ತು. ಆದರೆ ಈಗ ರಾಜ್ಯದಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದರು.
ಇದೇ ವೇಳೆ ಆಪರೇಶನ್ ಕಮಲಳಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜನೀತಿಯನ್ನು ಅನುಸರಿಸಿಕೊಂಡು ಹೋಗುವಾಗ ಕೆಲ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಬಣ್ಣ ಹಚ್ಚುವುದು ಬೇಡ. ರಾಜ್ಯದಲ್ಲಿ 60 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಅಭಿವೃದ್ದಿ ರಾಜಕಾರಣ ಮಾಡುವ ಗುರಿ ಬಿಜೆಪಿ ಹೊಂದಿದೆ ಎಂದು ತಿಳಿಸಿದರು.
|