ಕಳೆದೆರಡು ದಿನಗಳಿಂದ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಅಧಿಕೃತವಾಗಿ ಹೊರಬೀಳಲಿದೆ ಎಂದು ಊಹಾಪೋಹ ಹಬ್ಬಿತ್ತು. ಆದರೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಬೀಜಿಂಗ್‌ಗೆ ತೆರಳಿರುವ ಹಿನ್ನೆಲೆಯಲ್ಲಿ ಆಯ್ಕೆ ಘೋಷಣೆ ಇನ್ನು ಹದಿನೈದು ದಿನಗಳ ಕಾಲ ವಿಳಂಬವಾಗುವ ಸಾಧ್ಯತೆಗಳಿವೆ.
ಬೀಜಿಂಗ್‌ನಲ್ಲಿ ಶುಕ್ರವಾರದಿಂದ ಪ್ರಾರಂಭಗೊಳ್ಳುವ ಒಲಿಂಪಿಕ್‌ಗೆ ಸಮಾರಂಭದಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೆರಳಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿ ಮೂರು ತಿಂಗಳಾದರೂ ಕೆಪಿಸಿಸಿಗೆ ಅಧ್ಯಕ್ಷರ ನೇಮಕವಾಗಿಲ್ಲ.
ಇನ್ನು ಒಂದು ವಾರದೊಳಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಖರ್ಗೆ ತಿಳಿಸಿದ್ದರು. ಅಲ್ಲದೆ, ಒಕ್ಕಲಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಕುರಿತು ವದಂತಿಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಬಿ. ಚಂದ್ರೇಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿತ್ತು. ಆದರೆ ಹೈಕಮಾಂಡ್‌ನಿಂದ ಇನ್ನೂ ಅಂಕಿತ ಬಿದ್ದಿಲ್ಲ.
|