ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ರಾಜ್ಯದ ವಿವಿಧೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಪೊಲೀಸ್, ಅರಣ್ಯ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಿಢೀರನ್ ದಾಳಿ ನಡೆಸಿ ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಮೂಲಗಳು ತಿಳಿಸಿವೆ.

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ದಾವಣಗೆರೆ,ಬಿಜಾಪುರ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಅರಣ್ಯ, ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಮನೆ ಹಾಗೂ ನಿವಾಸದಲ್ಲಿ ಲೋಕಾಯುಕ್ತರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮೈಸೂರಿನ ಕುವೆಂಪುನಗರದಲ್ಲಿ ಇರುವ ಎಸಿಪಿ ಕೃಷ್ಣಪ್ಪ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕೃಷ್ಣಪ್ಪನವರು ಪ್ರಸ್ತುತ ಧಾರವಾಡದಲ್ಲಿ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ವೇಳೆ ಧಾರವಾಡದ ಡಿವೈಎಸ್ಪಿ ಬಿ.ಟಿ. ಚೌವ್ಹಾಣ್ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ, ಬೆಂಗಳೂರಿನ ಸಿಸಿಬಿ ಇನ್ಸ್‌‌ಪೆಕ್ಟರ್ ನಾಗೇಶ್, ದಾವಣಗೆರೆಯ ಆರ್‌‌ಟಿಒ ತೆಂಬದ್, ಚಿಕ್ಕಮಗಳೂರಿನ ಅರಣ್ಯಧಿಕಾರಿ ಖಾಗಾ ಮೊಯಿದ್ದೀನ್ ಸೇರಿದಂತೆ ಹಲವು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ರಾಜ್ಯದ ವಿವಿಧೆಡೆ ಲೋಕಾಯುಕ್ತರು ದಾಳಿ ನಡೆಸುತ್ತಿರುವ ದಾಳಿ ಕುರಿತು ಸಮಗ್ರ ಮಾಹಿತಿ ಇಂದು ಸಂಜೆಯೊಳಗೆ ಬಹಿರಂಗಗೊಳ್ಳುವ ಸಾಧ್ಯತೆಗಳಿವೆ.
ಮತ್ತಷ್ಟು
ಮತ್ತೆ ಲೋಡ್‌ ಶೆಡ್ಡಿಂಗ್‌‌ ಜಾರಿ
ಕೆಪಿಸಿಸಿ ಅಧ್ಯಕ್ಷಗಾದಿ ಆಯ್ಕೆಯಲ್ಲಿ ವಿಳಂಬ
ಕೋಕಾ ಜಾರಿ - ಕೇಂದ್ರದೊಂದಿಗೆ ಚರ್ಚೆ: ಸಿಎಂ
ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿ ಯಥಾಸ್ಥಿತಿ: ಕಾಗೇರಿ
ಮತೀಯ ಗಲಭೆ-ಶ್ರೀರಾಮ ಸೇನಾ ಕೈವಾಡವಿಲ್ಲ: ಮುತಾಲಿಕ್
ಜೆಡಿಎಸ್ ಸಮಯಸಾಧಕ ಪಕ್ಷ: ಸದಾನಂದ ಗೌಡ