ರಾಜ್ಯಕ್ಕೆ ವಿದ್ಯುತ್ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ತೋರಿಲ್ಲ ಎಂದು ಕೇಂದ್ರ ಸಚಿವ ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.
ನಗರಕ್ಕೆ ಗುರುವಾರ ಆಗಮಿಸಿದ ಅವರು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಬಿಎಚ್ಇಎಲ್‌ನ ಸಹಯೋಗದೊಂದಿಗೆ ಹೊಸ ಯೋಜನೆ ರಾಜ್ಯದಲ್ಲಿ ಪ್ರಾರಂಭಿಸಲಾಗುವುದು. ಅದರಂತೆ ಯಮರಸ, ಯಡ್ನಾಪುರ ಹಾಗೂ ಬಳ್ಳಾರಿಯಲ್ಲಿ ನೂತನ ಯೋಜನೆ ಸ್ಥಾಪನೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಇದಕ್ಕೂ ಮೊದಲು ನಡೆದ ಮಾತುಕತೆಯಲ್ಲಿ ರಾಜ್ಯದಲ್ಲಿ ಉಷ್ಣ ವಿದ್ಯುತ್ ಯೋಜನೆಯನ್ನು ತದಡಿಯಲ್ಲೇ ಮುಂದುವರಿಸಲು ಕೇಂದ್ರ ಒಪ್ಪಿಗೆ ಸೂಚಿಸಿರುವುದರ ಬಗ್ಗೆ ರಾಜ್ಯ ಸರ್ಕಾರ ಅಸಮಧಾನಗೊಂಡಿದೆ. ಇದನ್ನು ಸ್ಥಳಾಂತರಿಸುವಂತೆ ಸಚಿವರಲ್ಲಿ ರಾಜ್ಯ ಸರ್ಕಾರ ಮನವಿ ಮಾಡಿತು. ಈ ಕುರಿತು ಪರಿಶೀಲನೆಗೆ ವಿಶೇಷ ಸಮಿತಿ ರಚಿಸಲಾಗುವುದು ಎಂದು ಜೈರಾಮ್ ಭರವಸೆ ನೀಡಿದರು.
|