ಹೈಕೋರ್ಟ್ ನೀಡಿರುವ ಆದೇಶದಂತೆ ನಿಗದಿತ ಸಮಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ನಿಗದಿತ ಸಮಯದಂದೆ ನಡೆಯಲಿದೆ. ವಾರ್ಡ್‌ಗಳ ಪುನರ್ ವಿಂಗಡಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ವಿವರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಒಂದು ವಾರದೊಳಗೆ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹೈಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕೆಂದು ಆದೇಶ ನೀಡಿತ್ತು. ಆದರೆ ಈ ಬಗ್ಗೆ ಇದುವರೆಗೆ ಯಾವ ಬೆಳವಣಿಗೆಯೂ ನಡೆದಿಲ್ಲ ಎಂದು ಪ್ರತಿಪಕ್ಷಗಳು ಆರೋಪ ಮಾಡಿರುವ ಬೆನ್ನಲ್ಲೆ ಸಚಿವರು ಈ ಹೇಳಿಕೆ ನೀಡಿದ್ದಾರೆ.
|