ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರೊಂದು ಶನಿವಾರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಕಿತ್ತೂರು ಬಳಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಮೃತಪಟ್ಟವರು ಒಂದೇ ಕುಟುಂಬದವರೆಂದು ಗುರುತಿಸಲಾಗಿದ್ದು, ಮಹಾರಾಷ್ಟ್ರದ ಈಚಲಕರಂಜದವರು ಎಂದು ತಿಳಿದು ಬಂದಿದೆ. ಇಂಡಿಕಾ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯಿಂದಲೇ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೂಡಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
|