ಪ್ರಸ್ತುತ ರಾಜ್ಯದಲ್ಲಿ ಒಂದು ಲಕ್ಷ ಟನ್ ರಸಗೊಬ್ಬರ ಅಭಾವ ಎದುರಾಗಿದೆ ಎಂದು ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ತಿಳಿಸಿದ್ದಾರೆ.
ನಗರದ ಶನಿವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸಗೊಬ್ಬರದ ಅಭಾವವಿದೆ ಎಂದು ಸರ್ಕಾರ ಸಾಕಷ್ಟು ಬಾರಿ ಕೇಂದ್ರಕ್ಕೆ ಮನವಿ ಮಾಡಿದೆ ಆದರೆ ಇದುವರೆಗೂ ಕೇಂದ್ರ ಸರ್ಕಾರ ತಮ್ಮ ಬೇಡಿಕೆ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ರಸಗೊಬ್ಬರ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ನೇರ ಆರೋಪಿಸಿದ ಅವರು, ಕೇಂದ್ರದ ಮಲತಾಯಿ ಧೋರಣೆಯಿಂದ ರಸಗೊಬ್ಬರ ಸಮಸ್ಯೆ ರಾಜ್ಯದಲ್ಲಿ ತಲೆದೋರಿದೆ ಎಂದು ವಿವರಿಸಿದರು.
ರೈತರ ಆತ್ಮಹತ್ಯೆ ತಡೆಗೆ ರಾಜ್ಯದಲ್ಲಿ ಶೀಘ್ರವೇ ಕೃಷಿ ನೀತಿಯನ್ನು ಅಳವಡಿಸಲಾಗುವುದು ಎಂದು ತಿಳಿಸಿದ ಅವರು, ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರ ಬದ್ದವಾಗಿದೆ. ಅಲ್ಲದೆ, ರೈತರ ಅಭಿವೃದ್ದಿ ದೃಷ್ಟಿಯಿಂದ ರೈತರಿಗೆ ಎರಡು ಸಾವಿರ ರೂ. ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
|