ವಾರ್ಡ್ ವಿಂಗಡಣೆ ಪ್ರಕ್ರಿಯೆಯಿಂದಲೇ ಬಿಬಿಎಂಪಿ ಚುನಾವಣೆ ವಿಳಂಬವಾಗುತ್ತಿದೆ ಎಂದು ನಗರಾಭಿವೃದ್ದಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಆದಷ್ಟು ಬೇಗ ವಾರ್ಡ್‌ಗಳ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವಿಳಂಬದಿಂದಾಗಿ ಚುನಾವಣೆ ಮುಂದೂಡಬೇಕಾದ ಪರಿಸ್ಥಿತಿ ಎದುರಾದರೆ ನ್ಯಾಯಾಲಯದ ಮೊರೆ ಹೋಗಬೇಕೇ ಎನ್ನುವ ಬಗ್ಗೆ ಯೋಚಿಸಲಾಗುವುದು ಎಂದು ಅವರು ತಿಳಿಸಿದರು.
ಹೈಕೋರ್ಟ್ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸುವುದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿ ತ್ವರಿತ ಗತಿಯಲ್ಲಿ ವಾರ್ಡ್ ವಿಂಗಡಣೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಚುನಾವಣೆಯನ್ನು ಮುಂದೂಡುವ ಹಂಬಲ ಸರ್ಕಾರಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
|